ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ ಆಕೆಯ ಪತಿ ಅಚಾನಕ್ ಮನೆಗೆ ಬಂದಿದ್ದು, ಬಳಿಕ ನಡೆದ ಘಟನೆ ಕುತೂಹಲಕ್ಕೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ಮಹಿಳೆ ತನ್ನ ಗೆಳೆಯನೊಂದಿಗೆ ಪೂಲ್‌ನಲ್ಲಿ ಆಟವಾಡುತ್ತಿರುವುದು ಕಾಣುತ್ತದೆ. ಇದೇ ವೇಳೆ ಆಕೆಯ ಪತಿ ಮನೆಗೆ ಆಗಮಿಸುತ್ತಿದ್ದಂತೆ ಮಹಿಳೆ ಗಾಬರಿಗೊಂಡು, ಪರಿಸ್ಥಿತಿಯನ್ನು ನಿಭಾಯಿಸಲು ಯತ್ನಿಸುತ್ತಾಳೆ. ಆಕೆಯ ಸೂಚನೆ ಮೇರೆಗೆ ಬಾಯ್‌ಫ್ರೆಂಡ್ ನೀರಿನ ಅಡಿಯಲ್ಲಿ ಅಡಗಿಕೊಳ್ಳುತ್ತಾನೆ.
ಸುಮಾರು 2.8 ನಿಮಿಷಗಳ ಕಾಲ ಉಸಿರು ಬಿಗಿಹಿಡಿದು ನೀರಿನಡಿಯಲ್ಲಿ ಉಳಿದಿರುವುದು ವಿಡಿಯೋದಲ್ಲಿ ಗಮನಸೆಳೆಯುತ್ತದೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಗಂಡ ಮನೆಗೆ ಬಂದು ಪೂಲ್ ಕಡೆಗೆ ಬರುತ್ತಿದ್ದಾಗ ಮಹಿಳೆ ಆತನ ಗಮನ ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಾಳೆ. ಗಂಡ ಕೂಡ ಪೂಲ್‌ಗೆ ಇಳಿಯಲು ಮುಂದಾದಾಗ ಪರಿಸ್ಥಿತಿ ಗಂಭೀರವಾಗುತ್ತದೆ. ಆದರೂ ಮಹಿಳೆ ತನ್ನ ಚಾತುರ್ಯದಿಂದ ಗಂಡನಿಗೆ ಅನುಮಾನ ಬರದಂತೆ ನೋಡಿಕೊಳ್ಳುತ್ತಾಳೆ.
ಇದೇ ವೇಳೆ, ಅವಕಾಶ ಸಿಕ್ಕ ಕೂಡಲೇ ಬಾಯ್‌ಫ್ರೆಂಡ್ ನೀರಿನಿಂದ ಹೊರಬಂದು ಅಲ್ಲಿಂದ ಪರಾರಿಯಾಗುತ್ತಾನೆ. ಈ ವಿಡಿಯೋವನ್ನು @NeverteIImeodd ಎಂಬ ಬಳಕೆದಾರರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಬಳಕೆದಾರರು ಈ ಘಟನೆಯ ಬಗ್ಗೆ ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…