ನಂಜನಗೂಡು: ತಾಲೂಕಿನ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು. ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಗಳಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಣೆಗೆ ಸುಮಾರು 5 ಲಕ್ಷ ರೂ. ಸಾಲ ಪಡೆದಿದ್ದರು ಎನ್ನಲಾಗಿದೆ. ಪ್ರತಿ ತಿಂಗಳು 20 ಸಾವಿರ ರೂ.ಗೂ ಹೆಚ್ಚು ಕಂತು ಕಟ್ಟಬೇಕಾಗಿತ್ತು. ಸಾಲದ ಮೇಲೆ ಖರೀದಿಸಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಒದ್ದಾಡುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡುವಷ್ಟರಲ್ಲಿ ಜಯಶೀಲ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೆಲವು ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಸಾಲಗಾರರು ಗ್ರಾಮಗಳನ್ನು ತೊರೆಯುತ್ತಿದ್ದಾರೆ ಎಂದು ಮೈಕ್ರೋ ಫೈನಾನ್ಸ್ ವಿರುದ್ಧ ಭ್ರಷ್ಟರ ಬೇಟೆ ಪತ್ರಿಕೆಯು ಸಮಗ್ರ ವರದಿಯನ್ನು ಮಾಡಿದ್ದು ದ್ದನ್ನು ಸ್ಮರಿಸಬಹುದು. ವರದಿ: ಮೋಹನ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…