Categories: CrimeLatest

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ

ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹4.50 ಲಕ್ಷ ಮೌಲ್ಯದ 30 ಗ್ರಾಂ ತೂಕದ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹50 ಸಾವಿರ ಮೌಲ್ಯದ ಪ್ಯಾಶನ್ ಪ್ರೊ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಮ್ಮನಕೊಪ್ಪ ಗ್ರಾಮದ ಅಕ್ಷತಾ ಮಂಜುನಾಥ ಕುಂಬಾರ (30) ಅವರು ಫೆ.9ರಂದು ರಾತ್ರಿ ಪತಿ ಹಾಗೂ ಮಗಳೊಂದಿಗೆ ಮುರ್ಕವಾಡದ ಜಾತ್ರಾ ಮಹೋತ್ಸವಕ್ಕೆ ತೆರಳಿದ್ದರು. ದೇವಿಯ ದರ್ಶನ ಪಡೆದು ಅಮ್ಯೂಸ್‌ಮೆಂಟ್‌ನಲ್ಲಿ ಆಟವಾಡಿದ ಬಳಿಕ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಲೈಟ್ ಕಂಬದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಅವರ ಕೊರಳಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದ.

ಕಳುವಾದ ಮಂಗಳಸೂತ್ರದ ಮೌಲ್ಯವನ್ನು ದೂರಿನಲ್ಲಿ ₹1,75,885 ಎಂದು ನಮೂದಿಸಲಾಗಿತ್ತು. ಈ ಕುರಿತು ಅಕ್ಷತಾ ಅವರು ಹಳಿಯಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಳಿಯಾಳ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು. ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ತಾಂತ್ರಿಕ ಮಾಹಿತಿ ಹಾಗೂ ಲಭ್ಯವಾದ ಖಚಿತ ಸುಳಿವುಗಳ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡಿತ್ತು.

ಆ.8ರಂದು ಹಳಿಯಾಳ ತಾಲೂಕಿನ ಕಾವಲವಾಡ ಹಾಗೂ ಹೊಸ ಹಡಗಲಿ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಹೊಸ ಹಡಗಲಿಯ ಶಶಿಧರ ಉಳವಪ್ಪ ಬಾರ್ಕಿ, ಕೆ.ಕೆ.ಹಳ್ಳಿಯ ಕಿರಣ ಧರ್ಮರಾಜ್ ಗೋಡಿಮನಿ ಹಾಗೂ ಹಳಿಯಾಳ ನಗರದ ಮಡ್ಡಿಯ ವಾಸಿಮ್ ಶಿರಾಜುದ್ದೀನ್ ಚವಾಣ್ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ಜಾತ್ರೆಯ ಸಂದರ್ಭದಲ್ಲಿ ಮಹಿಳೆಯ ಕೊರಳಿನಿಂದ 30 ಗ್ರಾಂ ತೂಕದ ಚಿನ್ನದ ಮಂಗಳಸೂತ್ರವನ್ನು ಕಿತ್ತುಕೊಂಡು ಪರಾರಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನ ಹಾಗೂ ಬೈಕ್ ವಶ

ಆರೋಪಿಗಳಿಂದ ಸುಮಾರು ₹4.50 ಲಕ್ಷ ಮೌಲ್ಯದ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹50 ಸಾವಿರ ಮೌಲ್ಯದ ಪ್ಯಾಶನ್ ಪ್ರೊ ಮೋಟಾರ್ ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸ್ ತಂಡಕ್ಕೆ ಎಸ್ಪಿ ಪ್ರಶಂಸೆ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಪೊಲೀಸ್ ಉಪಾಧೀಕ್ಷಕ ಶಿವಾನಂದ ಮದರಕಂಡಿ ಅವರ ಮಾರ್ಗದರ್ಶನದಲ್ಲಿ, ಹಳಿಯಾಳ ಪೊಲೀಸ್ ವೃತ್ತ ನಿರೀಕ್ಷಕ ಜಯಪಾಲ್ ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಕೃಷ್ಣಗೌಡ ಅರಕೇರಿ ಹಾಗೂ ಮಹೇಶ್ ಮಾಳಿ ಸೇರಿದಂತೆ ಭೀಮಪ್ಪ ಕೆದರಮಂಡಲಗಿ, ಶ್ರೀಶೈಲ್ ಜಿ.ಎಂ., ಲಕ್ಷ್ಮಣ ಪೂಜಾರಿ, ಅರವಿಂದ ಭಜಂತ್ರಿ, ಮಂಜುನಾಥ ಬಾಲಿ, ನಿಂಗಪ್ಪ ಬಳ್ಳಾರಿ, ವಿನೋದ್, ಬಸವರಾಜ್ ಚವಡಿ, ಬಸವರಾಜ್ ತ್ಯಾಪಿ, ಜೀಪ್ ಚಾಲಕರಾದ ಗಂಗಾಧರ ಹಾಗೂ ಉಮೇಶ್ ತೇಲಿ ಮತ್ತು ಕಾರವಾರ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಅವರು ಆರೋಪಿಗಳ ಪತ್ತೆ ಹಾಗೂ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಕರಣವನ್ನು ತ್ವರಿತವಾಗಿ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago