“ರಕ್ಷಕನೇ ಭಕ್ಷಕ” ಎನ್ನುವ ಮಾತಿಗೆ ಸಾಕ್ಷಿಯಂತ ಘಟನೆಯೊಂದು Akolaದಲ್ಲಿ ಬೆಳಕಿಗೆ ಬಂದಿದೆ. ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಒಬ್ಬರು ವಶದಲ್ಲಿದ್ದ ಮಹಿಳೆಯ ಬಳಿ ಆಕೆಯ ಮಗಳನ್ನು ಲೈಂಗಿಕ ಉದ್ದೇಶಕ್ಕಾಗಿ ತನ್ನ ಮನೆಗೆ ಕಳುಹಿಸುವಂತೆ ಬೇಡಿಕೆಯಿಟ್ಟಿರುವ ಆರೋಪ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಆರೋಪಿ ಅಧಿಕಾರಿಯನ್ನು ರಾಜೇಶ್ ಜಾಧವ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಅವರು ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
80 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ವೇಳೆ, ಕರ್ತವ್ಯದಲ್ಲಿದ್ದ ರಾಜೇಶ್ ಜಾಧವ್ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. “ನೀನು ತುಂಬಾ ಸುಂದರವಾಗಿದ್ದೀಯಾ, ನಿನ್ನ ಮಗಳು ಕೂಡ ಸುಂದರವಾಗಿರಬೇಕು. ಆಕೆಯನ್ನು ನನ್ನ ಮನೆಗೆ ಕಳುಹಿಸಿಕೊಡು, ನಾನು 10,000 ರೂ. ಕೊಡುತ್ತೇನೆ” ಎಂದು ಹಣದ ಆಮಿಷವೊಡ್ಡಿ ಲೈಂಗಿಕ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಮಾತುಗಳಿಂದ ಬೆಚ್ಚಿಬಿದ್ದ ಮಹಿಳೆ, ತಕ್ಷಣವೇ ಠಾಣೆಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾರೆ. ದೂರಿನ ಗಂಭೀರತೆಯನ್ನು ಮನಗಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Archit Chandak ತಕ್ಷಣದಿಂದ ಜಾರಿಗೆ ಬರುವಂತೆ ಆರೋಪಿಯನ್ನು ಅಮಾನತುಗೊಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಮುನ್ನಡೆಸುತ್ತಿರುವ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅನಿಲ್ ಜುಮ್ಲೆ ಅವರ ಪ್ರಕಾರ, ಆರೋಪಿಯನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಇದರ ನಡುವೆ, ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಡಾ. ಆಶಾ ಮಿರ್ಗೆ ಅವರು, ಈ ಅಧಿಕಾರಿಯ ವಿರುದ್ಧ ಹಿಂದೆಯೂ ಇಂತಹ ಆರೋಪಗಳು ಕೇಳಿಬಂದಿದ್ದವು ಎಂದು ಹೇಳಿದ್ದಾರೆ. ಸುಮಾರು ದಶಕದ ಹಿಂದೆ ಕೌಟುಂಬಿಕ ಕಲಹ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ ತೋರಿದ ಪ್ರಕರಣಗಳು ಇವರ ಮೇಲಿದ್ದವು ಎನ್ನಲಾಗಿದೆ.
“ರಕ್ಷಣೆ ನೀಡಬೇಕಾದವರೇ ಇಂತಹ ಕೃತ್ಯಗಳಲ್ಲಿ ತೊಡಗಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ. ಅಕೋಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿರುವುದು ಶ್ಲಾಘನೀಯ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಪ್ರಸ್ತುತ ಈ ಪ್ರಕರಣ ರಾಜ್ಯದ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಮನೆಯ ವಿಶ್ವಾಸಕ್ಕೆ ಬಂದ ಸೊಸೆಯೇ ಅತ್ತೆಗೆ ವಿಷ ನೀಡಿ, ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಪರಾರಿಯಾದ ಬೆಚ್ಚಿಬೀಳಿಸುವ ಘಟನೆ…
ಪರಿಸರ ಸ್ನೇಹಿ ಬಟ್ಟೆಯ ಕೈಚೀಲಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಅಂದಿನ ಮೈಸೂರು ಜಿಲ್ಲಾಧಿಕಾರಿ…
“ಪ್ರೀತಿ ಕುರುಡು” ಎನ್ನುವ ಮಾತು ಮತ್ತೆ ಸಾಬೀತಾಗುವಂತ ಘಟನೆ ಒಂದರಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮ ಕಥೆ ದುರ್ಘಟನೆಗೆ ತಲುಪಿದೆ.…
ಕೌಟುಂಬಿಕ ಅಥವಾ ವೈವಾಹಿಕ ಅತ್ಯಾಚಾರದ ವಿಚಾರ ಮತ್ತೆ ಚರ್ಚೆಗೆ ಬಂದಿರುವ ಈ ಸಂದರ್ಭದಲ್ಲಿ ಜನಪ್ರಿಯ ಗಾಯಕಿ Chinmayi Sripaada ತೀವ್ರವಾಗಿ…
ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಅಭಿಯಾನದಡಿ ದೇಶಾದ್ಯಂತ…
ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ದಿನಗೂಲಿ ನೌಕರರಿಗೆ ಕರ್ನಾಟಕ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇದುವರೆಗೆ ಗುತ್ತಿಗೆ, ಹೊರಗುತ್ತಿಗೆ…