ಬೆಂಗಳೂರು: ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ರಸ್ತೆ ಮೇಲೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಬಂಧಿತನನ್ನು ಮೊಹಮ್ಮದ್ ಅಸ್ಲಾಂ ಎಂದು ಗುರುತಿಸಲಾಗಿದ್ದು, ವೆಸ್ಟ್ ಆಪ್ ಕಾರ್ಡ್ ರಸ್ತೆ ಹಾಗೂ ಮಾಗಡಿ ಮೈನ್ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುವ ಮೂಲಕ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಅಸ್ಲಾಂನ ಹಂಗಾಮಿಯಿಂದ ಸಾರ್ವಜನಿಕರು ಭೀತಿಗೊಳಗಾಗಿದ್ದರು ಎನ್ನಲಾಗಿದೆ.
ಆರೋಪಿ ನಡೆಸಿದ ಈ ಸಾಹಸವನ್ನು ಗಮನದಲ್ಲಿಟ್ಟುಕೊಂಡು ಸಂಚಾರ ಪೊಲೀಸ್ ಇಲಾಖೆ ತ್ವರಿತ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು, ಅವನು ಬಳಸುತ್ತಿದ್ದ ಸ್ಕೂಟರ್‌ನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗುತ್ತಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ರೀತಿಯ ಕೃತ್ಯಗಳಿಗೆ ಯಾವುದೇ ಸಹಿಷ್ಣುತೆ ಇರುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸರು ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…