Categories: CrimeLatest

ಮದುವೆ ಬೇಡ ಎಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರೇಮ ವಿಫಲತೆಯಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅಭಿಷೇಕ್ (23) ಮೃತ ಯುವಕನಾಗಿದ್ದು, ಇತ್ತೀಚೆಗಷ್ಟೇ ಖಾಸಗಿ ಕಾಲೇಜಿನಲ್ಲಿ ಬಿಕಾಂ ಪೂರ್ಣಗೊಳಿಸಿದ್ದನು.

ಮಾಹಿತಿಯ ಪ್ರಕಾರ, ಅಭಿಷೇಕ್ ತನ್ನ ಸಹಪಾಠಿ ಯುವತಿಯೊಂದಿಗೆ ಕಳೆದ 6-7 ವರ್ಷಗಳಿಂದ ಪ್ರೀತಿಯಲ್ಲಿ ಇದ್ದನು. ಈ ವಿಷಯ ಯುವತಿಯ ಕುಟುಂಬಕ್ಕೂ ತಿಳಿದಿದ್ದು, ಮದುವೆಗೆ ಅವರು ನಿರಾಕರಿಸಿದ್ದರು. ಇದರಿಂದ ಯುವತಿ ಅಭಿಷೇಕ್‌ನಿಂದ ದೂರವಾಗಲು ಪ್ರಾರಂಭಿಸಿದ್ದಳು.

ಈ ಬೆಳವಣಿಗೆಯಿಂದ ಮನನೊಂದ ಅಭಿಷೇಕ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

6 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago