ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ದೂರವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ. ಈ ಘಟನೆ ಮಾರ್ಚ್ 21ರಂದು ನಡೆದಿದೆ.
ಆಶಿಕ್ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿಯನ್ನು ಪ್ರೀತಿಸುತ್ತಿದ್ದು, ಇಬ್ಬರೂ ಹಲವು ಕಡೆ ಒಟ್ಟಿಗೆ ಸಂಚರಿಸುತ್ತಿದ್ದರು. ಪದವಿ ಪೂರ್ಣಗೊಳಿಸಿದ ನಂತರ ಆಶಿಕ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರೇಯಸಿ ಆತನಿಂದ ದೂರವಾಗತೊಡಗಿದ್ದರಿಂದ, ಆಶಿಕ್ ಮಾನಸಿಕವಾಗಿ ಕುಗ್ಗಿದ್ದನು. ಈ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಕಲಹವೂ ಉಂಟಾಗಿತ್ತು.
ಈ ಹಿನ್ನೆಲೆದಲ್ಲಿ, ಪ್ರೇಯಸಿಯೊಂದಿಗೆ ನಡೆದ ಜಗಳದ ಬಳಿಕ ಆಶಿಕ್ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಇನ್ನೂ, ಆಶಿಕ್ ಸಾವಿನ ಹಿಂದಿನ ಕಾರಣಗಳನ್ನು ಪರಿಶೀಲಿಸಿದಾಗ ವಾಟ್ಸಪ್ ಚಾಟಿಂಗ್‌ಗಳು ಹಲವು ಅಚ್ಚರಿಯ ಸಂಗತಿಗಳನ್ನು ಹೊರಹಾಕಿವೆ. ಕಾಸರಗೋಡಿನ ಯುವತಿಯನ್ನು ಪ್ರೀತಿಸುತ್ತಿದ್ದ ಆಶಿಕ್, ಆಕೆಯೊಂದಿಗೆ ಆತ್ಮಹತ್ಯೆಗೆ ಮುನ್ನ ವಿಡಿಯೋ ಕಾಲ್ ಹಾಗೂ ಚಾಟ್ ನಡೆಸಿದ್ದಾನೆ ಎಂಬುದು ಪತ್ತೆಯಾಗಿದೆ. ಈ ವೇಳೆ ಯುವತಿ ಅಸಭ್ಯವಾಗಿ ಮಾತನಾಡಿದ್ದು ಮಾತ್ರವಲ್ಲದೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದಾಗಿ ಮೊಬೈಲ್ ಚಾಟಿಂಗ್‌ನಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಯುವತಿ, ಆಕೆಯ ತಾಯಿ ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…