Latest

ಇ-ಮೇಲ್ ಬಾಂಬ್ ಬೆದರಿಕೆ ಹಬ್ಬಿಸಿದ್ದ ಯುವತಿ ಅರೆಸ್ಟ್: ಉಡುಪಿಯಿಂದ ಹಿಡಿದು ದೇಶದಾದ್ಯಂತ ತೀವ್ರ ಆತಂಕ ಸೃಷ್ಟಿಸಿದ್ದೆ

ಉಡುಪಿ: ನಿರಂತರವಾಗಿ ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳಿಸಿ ಅಧಿಕಾರಿಗಳನ್ನು ತಕ್ಷಣ ಎಚ್ಚರಿಕೆಮಾಡುತ್ತಿದ್ದ ಗುಪ್ತ ವ್ಯಕ್ತಿತ್ವದ ಮಹಿಳೆ ಕೈದಾಗಿದ್ದಾಳೆ. ಹಲವು ದಿನಗಳ ಶೋಧನೆಯ ನಂತರ ಪೊಲೀಸರು ಕೊನೆಗೂ ಈ ವಿಚಾರದಲ್ಲಿ ಮಹತ್ವದ ತಿರುವು ತಂದಿದ್ದಾರೆ.

ಬಂಧಿತೆಯು ಚೆನ್ನೈ ಮೂಲದ ರೀನಾ ಜೋಶಿಲ್ಡ್ ಎಂಬಾತಿ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ ವ್ಯಾಸಂಗ ಮಾಡಿದ ಈಕೆ, ದೇಶದ ಹಲವೆಡೆ ಬೆದರಿಕೆ ಸಂದೇಶ ಕಳಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಜೂನ್ 16ರಂದು ಉಡುಪಿ ನಗರದ ವಿದ್ಯೋದಯ ಪಬ್ಲಿಕ್‌ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಅಳವಡಿಸಲಾಗಿದೆ ಎಂಬ ಕುಟಿಲ ಸಂದೇಶ ಕಳುಹಿಸಿದ್ದಳು. ಈ ಸಂದೇಶದಿಂದ ಪಠಶಾಲೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿ, ತುರ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಯಿತು.

ಅಹಮದಾಬಾದ್‌ನ ಗೂಢಚರ್ಯಾ ತಂಡ ಹಾಗೂ ಸ್ಥಳೀಯ ಪೊಲೀಸರು ಸಹಕಾರದೊಂದಿಗೆ ಹುಡುಕಾಟ ನಡೆಸಿದ ಬಳಿಕ ಈಕೆಯನ್ನು ಬಂಧಿಸಲಾಗಿದೆ. ಪತ್ತೆಯಾಗಿರುವ ಮಾಹಿತಿಗಳ ಪ್ರಕಾರ, ಈಕೆಯ ವಿರುದ್ಧ ದೇಶದ ಅನೇಕ ನಗರಗಳಲ್ಲಿ ಇದೇ ರೀತಿಯ ಕೃತ್ಯಗಳ ಕುರಿತು ಪ್ರಕರಣಗಳು ದಾಖಲಾಗಿವೆ.

ಆದರೆ ಈಕೆ ಈ ರೀತಿ ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಏಕೆ ಕಳಿಸುತ್ತಿದ್ದಳು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ತನಿಖೆಯ ನಂತರವೇ ಆತನ ಉದ್ದೇಶ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ಇ-ಮೇಲ್ ಮತ್ತು ಡಿಜಿಟಲ್ ಬೆದರಿಕೆಗಳ ಬಗ್ಗೆ ಸೈಬರ್ ಸೆಕ್ಯುರಿಟಿಯ ಮಹತ್ವವನ್ನು ಮತ್ತೊಮ್ಮೆ ಹೈಲೈಟ್ ಮಾಡಿದೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

4 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

8 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

11 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

16 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago