ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಾಡುಹಗಲೇ ನಡೆದ ಭೀಕರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಬಸ್‌ಗಾಗಿ ಕಾಯುತ್ತಿದ್ದ 23 ವರ್ಷದ ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಮರಳಲು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕನೊಬ್ಬ ಏಕಾಏಕಿ ಬ್ಯಾಗ್‌ನಿಂದ ಕತ್ತಿಯನ್ನು ಹೊರತೆಗೆದು ಲಾವಣ್ಯ ಅವರ ಮೇಲೆ ದಾಳಿ ನಡೆಸಿದ್ದಾನೆ. ಅಪಾಯ ಅರಿತ ಲಾವಣ್ಯ ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆರೋಪಿ ಬೆನ್ನಟ್ಟಿ ಸಾರ್ವಜನಿಕರ ಎದುರೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಲಾವಣ್ಯ ಅವರ ದೂರದ ಸಂಬಂಧಿಯಾಗಿರುವ ಚೇತನ್ ಎಂಬಾತನೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಏಕಮುಖ ಪ್ರೀತಿಯನ್ನು ಯುವತಿ ನಿರಾಕರಿಸಿದ್ದರಿಂದ ಈ ಕೃತ್ಯ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಚೇತನ್‌ನ ಪತ್ತೆಗಾಗಿ ವಿಶೇಷ ತಂಡಗಳು ಶೋಧ ಕಾರ್ಯ ಆರಂಭಿಸಿವೆ.
ನೂರಾರು ಜನರ ಓಡಾಟವಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲೇ ಹಾಡುಹಗಲೇ ನಡೆದ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…