Categories: CrimeLatest

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾಕಮ್ಮ-ಮಂಜಶೆಟ್ಟಿ ದಂಪತಿಯ ಪುತ್ರಿ ರಚಿತಾ ಪ್ರಥಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ರಚಿತಾ ಸುಮಾರು ಒಂದೂವರೆ ವರ್ಷದಿಂದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನವೀನ್ ಚನ್ನರಾಯಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದೇ ಬೇಕರಿಯಲ್ಲಿ ರಚಿತಾ ಅವರ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇಬ್ಬರ ನಡುವಿನ ಪ್ರೇಮದ ವಿಚಾರವನ್ನು ರಚಿತಾ ಹಾಗೂ ನವೀನ್ ಸಾಕಮ್ಮ ಅವರ ಬಳಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಗಳ ಮದುವೆಯನ್ನು ನವೀನ್ ಜೊತೆ ಮಾಡಿಸುವುದಾಗಿ ಸಾಕಮ್ಮ ಭರವಸೆ ನೀಡಿದ್ದರು ಎನ್ನಲಾಗಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ನವೀನ್ ರಚಿತಾಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಇದೇ ವಿಚಾರ ಘಟನೆಗೆ ಕಾರಣವಾಗಿರಬಹುದೇ ಎಂಬ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.

ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಯುವತಿಯ ಸಾವಿಗೆ ಕಾರಣವಾದ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 hour ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 hour ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 hour ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 hour ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

1 hour ago

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago