ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ವೈದ್ಯರ ನಿರ್ಲಕ್ಷ್ಯದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿಕಿತ್ಸೆಗಾಗಿ ದಾಖಲಾಗಿದ್ದ 18 ವರ್ಷದ ಯುವತಿಯೊಬ್ಬಳು ಆಪರೇಷನ್ ನಂತರ ಅಸುನೀಗಿದ್ದು, ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ನಿವಾಸಿ ವಂದನಾ ಎಂಬ ಯುವತಿಗೆ ಕೈಯಲ್ಲಿ ಗುಳ್ಳೆಗಳು ಮೂಡಿದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವತ್ತಾಯಿತು. ತಕ್ಷಣ ವೈದ್ಯರು ಆಪರೇಷನ್ ಅಗತ್ಯವಿದೆ ಎಂದು ಸಲಹೆ ನೀಡಿದ್ದು, ವಂದನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಪರೇಷನ್ ಮೊದಲು ವೈದ್ಯರು ಎರಡು ಇಂಜೆಕ್ಷನ್ ನೀಡಿದ್ದು, ಅದಾದ ಬಳಿಕ ವಂದನಾಳ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದೆ. ಕುಟುಂಬಸ್ಥರ ಪ್ರಕಾರ, ಅವಳ ಶ್ವಾಸಕೋಶದ ಮೇಲೆ ಪರಿಣಾಮ ಬೀರಿದ ಪರಿಣಾಮದಿಂದ ಆರೋಗ್ಯ ಗಂಭೀರವಾಗಿದೆ.
ತಕ್ಷಣವೇ ಇತರ ಆಸ್ಪತ್ರೆಗೆ ರವಾನಿಸಲಾಗಿದ್ರೂ ಮಾರ್ಗಮಧ್ಯದಲ್ಲಿ ವಂದನಾ ಪ್ರಾಣಬಿಟ್ಟಿದ್ದಾರೆ. ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸುತ್ತಿರುವ ಕುಟುಂಬಸ್ಥರು, ತಮ್ಮ ಮಗಳ ಸಾವಿಗೆ ನ್ಯಾಯ ಕೋರಿ ಆಸ್ಪತ್ರೆಗೆ ಎದುರು ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಕೈಜೋಡಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…