Latest

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ನಿರ್ವಾಹಕ ಬಂಧನ”

ಮಂಗಳೂರು: ಮುಡಿಪು ಮಾರ್ಗವಾಗಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ದಲ್ಲಿ ನಿದ್ದೆಹೋಗಿದ್ದ ಯುವತಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ  ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ಬಾಗಲಕೋಟೆ ಜಿಲ್ಲೆ ಮೂಲದ ಪ್ರದೀಪ್ ಎಂಬಾತನೆಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಮುಡಿಪುವಿನಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಯುವತಿ ಬಸ್‌ನಲ್ಲೇ ನಿದ್ದೆಮಗ್ನವಾಗಿದ್ದ ವೇಳೆ, ನಿರ್ವಾಹಕ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಯತ್ನಿಸಿದ. ಈ ಕೃತ್ಯವನ್ನು ಗಮನಿಸಿದ್ದ ಮತ್ತೊಬ್ಬ ಪ್ರಯಾಣಿಕನು ಮೊಬೈಲ್ ಫೋನ್‌ನಲ್ಲಿ ಈ ದೃಶ್ಯವನ್ನು ದಾಖಲಿಸಿ, , ವಿಡಿಯೋ ವೈರಲ್  ಮಾಡಿದ್ದಾರೆ.

ವೀಡಿಯೋ ವೈರಲ್ ಆದ ತಕ್ಷಣ ಪೊಲೀಸರು ಸ್ಪಂದಿಸಿ ಪ್ರದೀಪ್ ಎಂಬ ನಿರ್ವಾಹಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಮುಂದಿನ ತನಿಖೆ ಜಾರಿಯಲ್ಲಿದೆ.

ಸರ್ಕಾರಿ ಬಸ್‌ನಲ್ಲಿ ಈ ರೀತಿ ನಡೆದಿರುವ ಅಸಭ್ಯ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿತ ಇಲಾಖೆ ನಿರ್ವಾಹಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago