Latest

ಯುವತಿಗೆ ನಡುರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ: ಬೆಂಗಳೂರಿನಲ್ಲಿ ಮಹಿಳಾ ಭದ್ರತೆಗೆ ಮತ್ತೆ ಸವಾಲು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆ ಮಹಾನಗರಗಳಲ್ಲಿ ಗಂಭೀರ ಚಿಂತನೆಯ ವಿಷಯವಾಗಿದ್ದು, ಮತ್ತೊಂದು ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಯುವತಿಯೊಬ್ಬರಿಗೆ ನಡೆದ ಅಮಾನವೀಯ ಘಟನೆ ಈಗ ಬಹಿರಂಗವಾಗಿದೆ.

ಮೂರು ದಿನಗಳ ಹಿಂದೆ, ಬೆಳಗಿನ ಜಾವ 4.30ರ ಸುಮಾರಿಗೆ, ಯುವತಿ ತನ್ನ ಸ್ನೇಹಿತರ ಮನೆಯಿಂದ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೆಣ್ಣೂರು ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ವಾಹನವನ್ನು ಹಿಂಬಾಲಿಸುತ್ತಿದ್ದರು. ಅಚ್ಚರಿಯವೆಂದರೆ, ಇವರು ಯುವತಿಯ ಸ್ಕೂಟರ್‌ಗೆ ಅಡ್ಡಗಟ್ಟಿ, ಲೈಂಗಿಕ ಕಿರುಕುಳ ನೀಡಿದಿದ್ದಾರೆ. ಖಾಸಗಿ ಭಾಗಕ್ಕೆ ಕೈ ಹಾಕಿ ಅವಮಾನಿಸುವಂತಹ ನಡೆ ತೋರಿದ ಆರೋಪ ಎದುರಾಗಿದೆ.

ಸ್ಥಳದಲ್ಲಿ ಕೆಲ ಸಾರ್ವಜನಿಕರು ಧಾವಿಸಿ ಕಾಮುಕರನ್ನು ಹಿಡಿಯಲು ಯತ್ನಿಸಿದಾಗ, ಇಬ್ಬರೂ ದಂಡುಗೊಳಿಸಿದವರು ಚಾಕು ತೋರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಯುವತಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಸ್ಥಳದ ಸಾಕ್ಷ್ಯಗಳ ಸಂಗ್ರಹ ಸೇರಿದಂತೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಘಟನೆ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಸದ್ದು ಮಾಡಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಹಿಳೆಯರು ಒಬ್ಬಂಟಿಯಾಗಿ ಸವಾರಿಯಾಗೋದು ಭಯಕಾರಿಯಾಗುತ್ತಿರುವ ಸಂದರ್ಭದಲ್ಲಿ, ಪೊಲೀಸರು ಗಂಭೀರ ಕ್ರಮ ಕೈಗೊಳ್ಳಬೇಕೆಂಬ  ಸಾರ್ವಜನಿಕರ ಒತ್ತಾಯ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago