ತಿರುವನಂತಪುರಂ, ಜುಲೈ 29: ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ತೀವ್ರ ಗಂಭೀರತೆಯನ್ನು ಪಡೆದುಕೊಂಡಿವೆ. ಇತ್ತೀಚೆಗೆ ತಿರುವನಂತಪುರಂನಲ್ಲಿ ನಡೆದ ಮತ್ತೊಂದು ಘಟನೆ ಇದಕ್ಕೆ ತಾಜಾ ಉದಾಹರಣೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಪಕ್ಕದಲ್ಲಿದ್ದ ವೃದ್ಧ ವ್ಯಕ್ತಿ ಕಿರುಕುಳ ನೀಡಿದ್ದು, ಯುವತಿ ತಕ್ಷಣವೇ ಪ್ರತಿಕ್ರಿಯಿಸಿ ಆತನಿಗೆ ಬಸ್‌ನಲ್ಲೇ ತರಾಟೆ ನೀಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ವಿವರಗಳನ್ನು ನೋಡಿದರೆ, ಯುವತಿ ತನ್ನ ಸ್ನೇಹಿತೆಯೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಪಕ್ಕದ ಸೀಟಿನಲ್ಲಿ ವೃದ್ಧ ವ್ಯಕ್ತಿಯೊಬ್ಬನು ಕುಳಿತುಕೊಂಡಿದ್ದ. ಕೆಲ ಹೊತ್ತಿನ ನಂತರ ಆತನು ನಿಧಾನವಾಗಿ ತನ್ನ ಕೈಯನ್ನು ಯುವತಿಯ ಎದೆ ಹತ್ತಿರ ತಂದು ಇಡಲು ಯತ್ನಿಸಿದ್ದ. ಆರಂಭದಲ್ಲಿ ಯುವತಿ ಈ ವರ್ತನೆಯನ್ನು ನಿರ್ಲಕ್ಷಿಸಿದರೂ, ಅವನು ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡುತ್ತಿದ್ದಾನೆ ಎಂಬುದು ಸ್ಪಷ್ಟವಾದ ನಂತರ, ಆಕೆ ತಕ್ಷಣವೇ ತನ್ನ ಸ್ನೇಹಿತೆಗೆ ಈ ಬಗ್ಗೆ ತಿಳಿಸಿದ್ದಾಳೆ.
ಸ್ನೇಹಿತೆ ಮೊಬೈಲ್‌ನಲ್ಲಿ ಆ ದೃಶ್ಯವನ್ನು ರೆಕಾರ್ಡ್ ಮಾಡುವ ಮೂಲಕ ಸಾಬೀತು ಸಂಗ್ರಹಿಸಿದ್ದಾರೆ. ನಂತರ ಆಕ್ರೋಶದಿಂದ ಎದ್ದು ನಿಂತ ಯುವತಿ ವೃದ್ಧ ವ್ಯಕ್ತಿಗೆ ಬಸ್‌ನಲ್ಲೇ ದಿಟ್ಟವಾಗಿ ಪ್ರಶ್ನಿಸಿ, “ನಿಮ್ಮ ಮನೆಯಲ್ಲೇನು ಹೆಣ್ಣುಮಕ್ಕಳು ಇಲ್ಲವೇ?” ಎಂದು ಕಿಡಿಕಾರಿದ್ದಾರೆ. ಅಲ್ಲಿಯವರೆದುರು ಅವನಿಗೆ ಕಪಾಳಮೋಕ್ಷ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವತಿಯ ಧೈರ್ಯಮಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆಯು ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಚರ್ಚೆಗೆ ಗ್ರಾಸವಾಗುತ್ತಿದೆ. ಪೊಲೀಸರೇನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…
ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…
ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…