Crime

ಅಶ್ಲೀಲ ಮೆಸೇಜ್ ಕಳುಹಿಸಿ ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಬಂಧನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಡಿ ಸೈಯದ್ (24) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ತಿಳಿದಿರುವಂತೆ, ಬೆಳ್ತಂಗಡಿಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಗೆ ಸೈಯದ್ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನು. ಘಟನೆ ಬಯಲಾಗುತ್ತಿದ್ದಂತೆ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ಹಿಡಿದು ಹಲ್ಲೆ ನಡೆಸಿ, ನಂತರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದರು. ಕಾರ್ಯಕರ್ತರು ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಅದರಲ್ಲಿ ಅಶ್ಲೀಲ ವೀಡಿಯೋ ಮತ್ತು ಸಂದೇಶಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಕಾರ್ಕಳದ ನಿವಾಸಿಯಾದ ಸೈಯದ್, ಕಬ್ಬಡ್ಡಿ ಆಟಗಾರನಾಗಿಯೂ ಗುರುತಿಸಲಾಗಿದೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆತನನ್ನು ಬಂಧಿಸಿ, ರಾತ್ರಿ ಸಮಯದಲ್ಲಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದರು. ವಿಚಾರಣೆ ನಂತರ ನ್ಯಾಯಾಧೀಶರು ಶರತ್ತುಬದ್ಧ ಜಾಮೀನು ನೀಡಿದರು.
ಈ ಸಂಬಂಧ ಬೆಳ್ತಂಗಡಿ ಪೊಲೀಸರು ಮುಂದಿನ ಹಂತದ ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago