ಬಾರಾಸತ್ (ಪಶ್ಚಿಮ ಬಂಗಾಳ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಛಾಯಾಚಿತ್ರಕ್ಕೆ ಬೆಂಕಿ ಹಚ್ಚಿ, ಅದರಿಂದ ಸಿಗರೇಟ್ ಹಚ್ಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದ ಆರೋಪದ ಮೇಲೆ ಸೌಮಿಕ್ ಚಟರ್ಜಿ ಎಂಬ ಯುವಕನನ್ನು ಬಾರಾಸತ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರಧಾನಿ ಮೋದಿ ಅವರ ಫೋಟೋಗೆ ಬೆಂಕಿ ಹಚ್ಚಿ, ಅದರಿಂದ ಸಿಗರೇಟ್ ಹೊತ್ತಿಸಿಕೊಂಡ ದೃಶ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಮತ್ತು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ದೂರು ಸ್ವೀಕರಿಸಿದ ಬಾರಾಸತ್ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಸೌಮಿಕ್ ಚಟರ್ಜಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ಸಂಬಂಧಿತ ಕಾನೂನು ಕ್ರಮ ಕೈಗೊಳ್ಳಲಾಗಿದೆ.
