Latest

ಅಕ್ರಮ ಮರಳು ಸಾಗಣೆ ವಿರೋಧಿಸಿ ಪ್ರಶ್ನೆಿಸಿದ ಯುವಕನಿಗೆ ಹಲ್ಲೆ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ದೂರು

ಉಡುಪಿ: ಅಕ್ರಮ ಮರಳು ಸಾಗಣೆಯನ್ನು ಪ್ರಶ್ನಿಸಿದ ಯುವಕನ ಮೇಲೆ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ (28) ಎಂಬ ಯುವಕ ಗಾಯಗೊಂಡಿದ್ದು, ಈತನ ಮೇಲೆ ಜಿನೇಂದ್ರ ಚಂದು ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಜಿನೇಂದ್ರ ಚಂದು ಎಂಬವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಅವರು ಸಾಲಿಗ್ರಾಮದ ಬಳ್ಳೂರು ಕಟ್ಟೆ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಚಂದ್ರಶೇಖರ್ ಅಕ್ರಮ ಕ್ರಮವನ್ನು ಪ್ರಶ್ನಿಸುತ್ತಾ ತಡೆದ ವೇಳೆ, ಜಿನೇಂದ್ರ ಚಂದು ಬಳಸಿ ಚಂದ್ರಶೇಖರ್‌ನ ತಲೆ, ಭುಜ ಹಾಗೂ ಕಣ್ಣು ಭಾಗಕ್ಕೆ ತೀವ್ರವಾಗಿ ಹಲ್ಲೆ ಮಾಡಿದ ಆರೋಪ ಎದುರಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಚಂದ್ರಶೇಖರ್ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಬಳಿಕ ಆರೋಪಿ ಜಿನೇಂದ್ರ ಚಂದು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯಾರಂಭಿಸಿದ್ದಾರೆ.

ಸ್ಥಳೀಯರು ಅಕ್ರಮ ಮರಳು ಸಾಗಣೆ ಹಾಗೂ ಇದಕ್ಕೆ ಸಂಬಂಧಿಸಿದ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸರು ವಾಟಾಳು ಆರೋಪಿಗೆ ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ವ್ಯಕ್ತವಾಗಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

3 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

3 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

4 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

4 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

4 hours ago