ಧಾರವಾಡದಲ್ಲಿ ಭೀತಿಯನ್ನು ಉಂಟುಮಾಡುವಂತಹ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಶೋಕ ಮತ್ತು ದಿಗ್ಭ್ರಮೆ ವ್ಯಕ್ತವಾಗಿದೆ.
ಹಾಶ್ಮಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಇದ್ದ ಫೈರೋಜ್ ಪಠಾಣ್ ಮೇಲೆ ನಿನ್ನೆ ರಾತ್ರಿ ನಾಲ್ವರು ಅಪರಿಚಿತರು ದಾಳಿ ನಡೆಸಿದ್ದಾರೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮನಬಂದಂತೆ ಹೊಡೆದಿದ್ದಾರೆ. ಪರಿಣಾಮವಾಗಿ ತೀವ್ರ ರಕ್ತಸ್ರಾವಗೊಂಡ ಫೈರೋಜ್ ಪಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಆರೋಪಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.
ಫೈರೋಜ್ ಪಠಾಣ್ ಅವರು ಧಾರವಾಡದ ಚುರುಕು ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಜಕೀಯ ಜೀವನವನ್ನು ಎನ್‌ಎಸ್‌ಯುಐ ಮೂಲಕ ಆರಂಭಿಸಿ, ನಂತರ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ವಹಿಸಿಕೊಂಡಿದ್ದರು.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವೈಯಕ್ತಿಕ ದ್ವೇಷ, ರಾಜಕೀಯ ವೈರತ್ವ ಸೇರಿದಂತೆ ವಿವಿಧ ಕೋನಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆದರೆ ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Belagavi ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಅಜಯಸಿಂಗ್ ರಜಪೂತ್ ಅವರ ನಿವಾಸ ಮತ್ತು ಸಂಬಂಧಿತ ಸ್ಥಳಗಳ ಮೇಲೆ…
ಕನ್ನಡ ಮತ್ತು ತೆಲುಗು ಸಂಗೀತ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಗಾಯಕಿ Mangli ಹಾಗೂ ಅವರ ಸಹೋದರನ ವಿರುದ್ಧ ಭಾರೀ ವಂಚನೆ…
ನೆರೆಯ ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ ನಲ್ಲಿ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ,…
ಅಂತರ್‌ಧರ್ಮೀಯ ವಿವಾಹ ಮಾಡಿಕೊಂಡಿರುವ ಯುವ ಜೋಡಿಯೊಂದು ತನ್ನ ಸುರಕ್ಷತೆಗಾಗಿ ಜಿಲ್ಲಾ ಪೊಲೀಸ್ ಅಧಿಕಾರಿಗಳ ನೆರವು ಬೇಡಿರುವ ಘಟನೆ ಇದೀಗ ಗಮನ…
ದೇಶದಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡರೂ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ ನೀಡುವ ಘಟನೆಗಳು ನಿಲ್ಲುವ…
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ…