Categories: CrimeLatest

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ನಾಯಕ ಫೈರೋಜ್‌ ಪಠಾಣ್‌ ಬರ್ಬರ ಹತ್ಯೆ: ಮನೆಗೆ ನುಗ್ಗಿ ದುಷ್ಕರ್ಮಿಗಳ ದಾಳಿ

ಧಾರವಾಡದಲ್ಲಿ ಭೀತಿಯನ್ನು ಉಂಟುಮಾಡುವಂತಹ ಘಟನೆ ನಡೆದಿದೆ. ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಶೋಕ ಮತ್ತು ದಿಗ್ಭ್ರಮೆ ವ್ಯಕ್ತವಾಗಿದೆ.

ಹಾಶ್ಮಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಇದ್ದ ಫೈರೋಜ್‌ ಪಠಾಣ್‌ ಮೇಲೆ ನಿನ್ನೆ ರಾತ್ರಿ ನಾಲ್ವರು ಅಪರಿಚಿತರು ದಾಳಿ ನಡೆಸಿದ್ದಾರೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮನಬಂದಂತೆ ಹೊಡೆದಿದ್ದಾರೆ. ಪರಿಣಾಮವಾಗಿ ತೀವ್ರ ರಕ್ತಸ್ರಾವಗೊಂಡ ಫೈರೋಜ್‌ ಪಠಾಣ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಆರೋಪಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಫೈರೋಜ್‌ ಪಠಾಣ್‌ ಅವರು ಧಾರವಾಡದ ಚುರುಕು ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಜಕೀಯ ಜೀವನವನ್ನು ಎನ್‌ಎಸ್‌ಯುಐ ಮೂಲಕ ಆರಂಭಿಸಿ, ನಂತರ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆ ವಹಿಸಿಕೊಂಡಿದ್ದರು.

ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವೈಯಕ್ತಿಕ ದ್ವೇಷ, ರಾಜಕೀಯ ವೈರತ್ವ ಸೇರಿದಂತೆ ವಿವಿಧ ಕೋನಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆದರೆ ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

6 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago