ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ಭೀಕರ ಘಟನೆ ಒಂದು ಬೆಳಕಿಗೆ ಬಂದಿದೆ. ಮೇಕೆ ಮೇಯಿಸಲು ಹೋಗಿದ್ದ ಯುವಕನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ, ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ.
ಮೃತಪಟ್ಟವನು ಗುರುಪುರದ ನಿವಾಸಿಯಾದ ಹರೀಶ್ (28) ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಮೆಕ್ಕೆಜೋಳದ ಗದ್ದೆ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಹುಲಿ ಹರೀಶ್ ಮೇಲೆ ದಾಳಿ ನಡೆಸಿದೆ. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗಮಧ್ಯೆ ಅವನು ಮೃತಪಟ್ಟಿದ್ದಾನೆ.
ಘಟನೆ ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ಸಮೀಪದ ಅರಣ್ಯವಲಯದಲ್ಲಿ ಸಂಭವಿಸಿದ್ದು, ಈ ಮೂಲಕ ಗ್ರಾಮದಲ್ಲಿ ಭಯದ ವಾತಾವರಣ ಮನೆಮಾಡಿದೆ. ಗ್ರಾಮದ ಜನರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ಹುಲಿಯ ಮೇಲೆ ನಿಗಾ ಇಡಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಭದ್ರತೆಗಾಗಿ ತಾತ್ಕಾಲಿಕ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…