Latest

ಮದ್ದೂರಿನಲ್ಲಿ ಯುವಕನ ದಾರುಣ ಅಂತ್ಯ: ಆತ್ಮಹತ್ಯೆಯೋ ಅಥವಾ ಅಪಘಾತವೋ?

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಸರ್ಕಾರಿ ಬಸ್‌ಗೊಬ್ಬಳಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಈ ಘಟನೆ ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತಪಟ್ಟ ಯುವಕನನ್ನು ತೂಬಿನಕೆರೆ ಗ್ರಾಮದ 23 ವರ್ಷದ ಅರುಣ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅವರು ಸರ್ಕಾರಿ ಬಸ್ ನಿಲ್ದಾಣದ ಹತ್ತಿರದ ಹೆದ್ದಾರಿ ವಿಭಜಕದ ಮೇಲೆ ಕುಳಿತಿದ್ದರು.

ಈ ವೇಳೆ ಮದ್ದೂರಿನಿಂದ ಕೆಸ್ತೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಿಂದಿನ ಭಾಗಕ್ಕೆ ಅರುಣ್ ಸಿಕ್ಕಿ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರುಣ್ ಆತ್ಮಹತ್ಯೆ ಮಾಡಿಕೊಂಡರಾ ಅಥವಾ ಇದು ದುರದೃಷ್ಟಕರ ಅಪಘಾತವೋ ಎಂಬುದನ್ನು ತನಿಖೆಯ ಬಳಿಕ ಸ್ಪಷ್ಟತೆ ಬರಲಿದೆ.

ಸ್ಥಳೀಯರು ಈ ದುರ್ಘಟನೆಯನ್ನು ನೋಡಿಯೇ ಬೆಚ್ಚಿಬಿದ್ದಿದ್ದು, ಪೊಲೀಸರು ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago