Latest

ಯುಗಾದಿ ಪಾಡ್ಯದ ನಿಮಿತ್ಯವಾಗಿ ದೇವರ ಪೂಜೆಗೆಂದು ತೆರಳಿದ ಯುವಕರು ಕೃಷ್ಣಾ ನದಿ ನೀರು ಪಾಲು

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ಶ್ರೀ ಬೊಮ್ಮಲಿಂಗೆಶ್ವರ ಹಾಗೂ ಲಕ್ಕಮ್ಮದೇವಿಯ ಪೂಜಾ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುಗಾದಿ ಪಾಡ್ಯದಂದು ಊರಿನ ಹಿರಿಯರು ಮತ್ತು ಯುವಕರು ಸೇರಿ ಸಂಪ್ರದಾಯದಂತೆ ಹೀರೆಹೊಳಿ (ಕೃಷ್ಣಾ ನದಿ) ಗೆ ದೇವರನ್ನು ತೆಗೆದುಕೊಂಡು ಹೋಗಿ ನದಿ ಸ್ನಾನ ಮಾಡಿಸಲು ಹೋಗಿದ್ದಾಗ ಇಲಾಳ ಗ್ರಾಮದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಒಟ್ಟಾರೆಯಾಗಿ 5 ಜನರು ನೀರಿನೊಳಗೆ ಇಳಿದು ಸ್ನಾನ ಮಾಡಲು ತೆರಳಿದ್ದಾರೆ. ಐದು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲಿಯ ಸ್ಥಳೀಯರೇ ಈ ಇಬ್ಬರನ್ನು ಕಾಪಾಡಿದ್ದಾರೆ.
ಆದರೆ ದುರದೃಷ್ಟವಶಾತ್ ಇನ್ನೂ ಮೂವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನೀರು ಪಾಲಾದ ಯುವಕರು ಸೋಮಶೇಖರ್ ದೇವರಮನಿ ವಯಸ್ಸು 17 ಡಿಪ್ಲೋಮಾ ಅಭ್ಯಾಸ ಮಾಡುತ್ತಿದ್ದಾನೆ. ಮತ್ತೊಬ್ಬರು ಮಲ್ಲಪ್ಪ ಬಸಪ್ಪ ಬಗಲಿ ವಯಸ್ಸು 15
9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೋರ್ವ ಪರನಗೌಡ ಮಲ್ಲಪ್ಪ ಬೀಳಗಿ ವಯಸ್ಸು 16, ಈ ಬಾರಿಯ 10 ನೇ ತರಗತಿ 2024-25 ನೇ ಸಾಲಿನ SSLC ಪರೀಕ್ಷೆಯನ್ನು ಬರೆಯುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.
ಇದರ ಪೈಕಿ ಒಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹವನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಗ್ರಾಮೀಣ ಪೋಲಿಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

27 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

50 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

1 hour ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

20 hours ago